UDUPI ; ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಸಾವು
Saturday, September 2, 2023
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿಯ ಶಿರ್ವ ಮೂಲದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ರಿಯಾನ್ನಾ ಜೀನ್ ಡಿ’ಸೋಜಾ (20) ಮೃತ ವಿದ್ಯಾರ್ಥಿನಿ.
ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ರಿಯಾನ್ನ ಕಳೆದ ವರ್ಷ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು ಮಣಿಪಾಲ ಮತ್ತು ಬೆಂಗಳೂರಿನಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿದ್ಯಾಭ್ಯಾಸದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಮಂಚೂಣಿಯಲ್ಲಿದ್ದ ರಿಯಾನ್ನಾ ಅತ್ಯುತ್ತಮ ನೃತ್ಯಪಟುವಾಗಿದ್ದರು ಅವರುಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದರು.