UDUPI ; ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ
Tuesday, September 5, 2023
ರಾಷ್ಟ್ರೀಯ ಮಟ್ಟದ ಬಾಕ್ಸಿಂಗ್ ಪ್ರತಿಭೆ ಉಡುಪಿಯ ಮಲ್ಪೆ ನಿವಾಸಿ ವಿರಾಜ್ ಮೆಂಡನ್ ನೇಣಿಗೆ ಶರಣಾಗಿದ್ದಾರೆ.
ಮನೆಯಲ್ಲಿ ಒಬ್ಬರೇ ಇದ್ದ ಸಂದರ್ಭ ನೇಣಿಗೆ ಶರಣಾಗಿದ್ದಾರೆ.
28 ವರ್ಷದ ವಿರಾಜ್, ಮಲ್ಪೆ ಪಡುಕರೆಯ ಭಾಸ್ಕರ್ ಕುಂದರ್ ಹಾಗೂ ಮೋಹಿನಿ ಮೆಂಡನ್ ಅವರ ಪುತ್ರ, ಕಳೆದ ಎಂಟು ವರ್ಷಗಳಿಂದ ಬಾಕ್ಸಿಂಗ್‌ನಲ್ಲಿ ತೊಡಗಿಸಿಕೊಂಡಿದ್ದ ವಿರಾಜ್, ಭಾರತದಲ್ಲಿ ಪ್ರೊ ಬಾಕ್ಸಿಂಗ್‌ನಲ್ಲಿ 5ನೇ ರ‌್ಯಾಂಕ್ ಹೊಂದಿರುವ ವಿರಾಜ್ ಮುಂದಿನ ದಿನಗಳಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಿ ದೇಶಕ್ಕೆ ಕೀರ್ತಿ ತರಬೇಕೆಂಬ ಹಂಬಲ ಹೊಂದಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.