ಜನನ-ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ: ಎಡಿಸಿ ಡಾ. ಆನಂದ್
ಜನನ-ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ: ಎಡಿಸಿ ಡಾ. ಆನಂದ್
ಜನನ ಮರಣ ನೋಂದಣಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ ಎಲ್ಲ ನೋಂದಣಿ ಘಟಕಗಳು ನಿಯಮಾನುಸಾರ ನೋಂದಣಿ ಚಟುವಟಿಕೆ ಮಾಡಬೇಕು. ಜನನ ಮರಣ ನೋಂದಣಿಗೆ ಆಧಾರ್ ಕಡ್ಡಾಯವಲ್ಲ. ಬೇರೆ ದಾಖಲೆಗಳಾದ ವಾಹನ ಪರವಾನಿಗೆ ಮುಂತಾದ ದಾಖಲೆಗಳನ್ನು ಬಳಸಬಹುದಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಜನನ ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಜನನ ಮರಣ ನೋಂದಣಿಗೆ ಯಾವುದೇ ವಿಳಂಬ ಮಾಡಬಾರದು. ಇದರಿಂದ ಜನರು ತೊಂದರೆಗೆ ಒಳಗಾಗುತ್ತಾರೆ. ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವಾಗ ಮರಣದ ಕಾರಣವನ್ನು ಸರಿಯಾಗಿ ನಮೂದಿಸಬೇಕು ಎಂದು ಅವರು ಮಾಹಿತಿ ನೀಡಿದರು.
ಕಂದಾಯ ಇಲಾಖೆ, ನಗರಾಭಿವೃದ್ಧಿ ಮತ್ತು ಸಾಂಖ್ಯಿಕ ಅಧಿಕಾರಿಗಳು ಶೇ. 100ರಷ್ಟು ಘಟನೆಗಳು ದಾಖಲಾಗಿರುವ ಬಗ್ಗೆ ಪರಿಶೀಲಿಸಬೇಕು. ಪರಿಶೀಲನಾ ವರದಿಯನ್ನು ಪ್ರತಿ ತ್ರೈಮಾಸಿಕಕ್ಕೆ ಕಳುಹಿಸಬೇಕು ಎಂದು ಅವರು ಮಾಹಿತಿ ನೀಡಿದರು.