ಪೊಲೀಸ್ ಇಲಾಖೆಯಲ್ಲಿ ಹೊಸ ನೇಮಕಾತಿ: 18 ಸಾವಿರ ಕಾನ್ಸ್‌ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ
ಪೊಲೀಸ್ ಇಲಾಖೆಯಲ್ಲಿ ಹೊಸ ನೇಮಕಾತಿ: 18 ಸಾವಿರ ಕಾನ್ಸ್‌ಟೆಬಲ್ ಹುದ್ದೆಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಬಲಗೊಳಿಸುವತ್ತ ಗಮನ ನೀಡಲಾಗಿದೆ. ಪೊಲೀಸ್ ಇಲಾಖೆಗೆ ಆಧುನಿಕ ಸ್ಪರ್ಶ ನೀಡುವ ಜೊತೆಗೆ ಸಿಬ್ಬಂದಿ ಬಲವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಠಾಣೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೂತನ ಸಿಬ್ಬಂದಿ ನೇಮಕಾತಿಗೆ ಪ್ರಕ್ರಿಯೆ ಆರಂಭವಾಗಿದೆ.
18 ಸಾವಿರ ಕಾನ್ಸ್‌ಟೆಬಲ್ ಹುದ್ದೆಗೆ ಶೀಘ್ರವೇ ಅರ್ಜಿ ಆಹ್ವಾನ ಮಾಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಎಂಜಿನಿಯರ್ ಮತ್ತಿತರ ತಾಂತ್ರಿಕ ಶಿಕ್ಷಣ ಪಡೆದವರು ಪೊಲೀಸ್ ಇಲಾಖೆಗೆ ಸೇರಲು ಉತ್ಸುಕರಾಗಿದ್ದಾರೆ. ಇದರಿಂದ ಇಲಾಖೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ಹೇಳಿದರು
ರಾಜ್ಯದ ಪೊಲೀಸ್ ಠಾಣೆಗಳನ್ನು ಕೇಂದ್ರೀಕೃತ ವ್ಯವಸ್ಥೆಯಡಿ ನಿಯಂತ್ರಿಸುವ ಕಮಾಂಡ್ ಸೆಂಟರ್ ಮುಂದಿನ ಮೂರು ತಿಂಗಳಲ್ಲಿ ಆರಂಭವಾಗಲಿದೆ. ಇದು ಬೆಂಗಳೂರಿನಲ್ಲಿ ಕಾರ್ಯಾಚರಿಸಲಿದೆ ಎಂದು ಅವರು ಮಾಹಿತಿ ನೀಡಿದರು.