ಬಿಸಿಸಿಐ U19 ಮಹಿಳಾ ಕ್ರಿಕೆಟ್ ಟೂರ್ನಿ: ಕರ್ನಾಟಕದಿಂದ ಶ್ರೀನಿತಿ ಪಿ. ರೈ ಆಯ್ಕೆ
Sunday, October 1, 2023
ಬಿಸಿಸಿಐ U19 ಮಹಿಳಾ ಕ್ರಿಕೆಟ್ ಟೂರ್ನಿ: ಕರ್ನಾಟಕದಿಂದ ಶ್ರೀನಿತಿ ಪಿ. ರೈ ಆಯ್ಕೆ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ನ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿಗೆ ಕರ್ನಾಟಕದಿಂದ ಶ್ರೀನಿತಿ ಪಿ. ರೈ ಆಯ್ಕೆಯಾಗಿದ್ದಾರೆ.
ಸ್ಥಳೀಯ ಟೂರ್ನಿಗಳಲ್ಲಿ ಯಶಸ್ವಿ ಪ್ರದರ್ಶನ ನೀಡಿರುವ ಶ್ರೀನಿತಿ ಪಿ. ರೈ ಅವರು ಕರ್ನಾಟಕ ರಾಜ್ಯ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಪುತ್ತೂರು ಮೂಲದ ಶ್ರೀನಿತಿ ಬೆಂಗಳೂರಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಎಡಗೈ ಸ್ಪಿನ್ನರ್ ಆಗಿ ತಮ್ಮ ಕ್ರಿಕೆಟ್ ಭವಿಷ್ಯದ ಹೊಸ ಅಧ್ಯಾಯ ಆರಂಭಿಸಿದ್ದಾರೆ.
ಅವರಿಗೆ ಕರಾವಳಿ ಜನತೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.