ವೈನ್ ಶಾಪ್ ಲೈಸನ್ಸ್‌ಗೆ ಲಂಚ: ಅಬಕಾರಿ ಡಿ.ಸಿ. ಸಹಿತ ನಾಲ್ವರು ಅರೆಸ್ಟ್
ವೈನ್ ಶಾಪ್ ಲೈಸನ್ಸ್‌ಗೆ ಲಂಚ: ಅಬಕಾರಿ ಡಿ.ಸಿ. ಸಹಿತ ನಾಲ್ವರು ಅರೆಸ್ಟ್
ವೈನ್ ಶಾಪ್ ಆರಂಭಿಸಲು ಲೈಸನ್ಸ್ ನೀಡಲು ಲಂಚ ಪಡೆಯುತ್ತಿದ್ದಾಗ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಸ್ವಪ್ನ ಸಹಿತ ನಾಲ್ವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಸ್ವಪ್ನ, ಪ್ರಥಮ ದರ್ಜೆ ಸಹಾಯಕ ಅಶೋಕ್ ಎಚ್.ಎಂ., ಹರಿಹರ ಅಬಕಾರಿ ವಲಯ ಕಚೇರಿಯ ಅಬಕಾರಿ ನಿರೀಕ್ಷಕಿ ಶೀಲಾ ಹಾಗೂ ದ್ವಿತೀಯ ದರ್ಜೆ ಸಹಾಯಕಿ ಶೈಲಶ್ರೀ ಎಂದು ಗುರುತಿಸಲಾಗಿದೆ.
ದಾವಣಗೆರೆ ಜಿಲ್ಲೆಯ ಹರಿಹರದ ಅಮರಾವತಿ ಎಂಬಲ್ಲಿ ಮದ್ಯದಂಗಡಿ ಆರಂಭಿಸಲು ಡಿ.ಜಿ. ರಘುನಾತ ಎಂಬವರು ಅರ್ಜಿ ಸಲ್ಲಿಸಿದ್ದರು. ಅವರ ಬಳಿ ಆರೋಪಿಗಳು ಮೂರು ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.
ನಗರದ ದೇವರಾಜ ಅರಸು ಬಡಾವಣೆಯಲ್ಲಿ ಅಬಕಾರಿ ಇಲಾಖೆಯ ಕಚೇರಿಯಲ್ಲಿ ಆರೋಪಿ ಅಶೋಕ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಪೊಲೀಸರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.