ಡಿಸೆಂಬರ್ 23ಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ
ಡಿಸೆಂಬರ್ 23ಕ್ಕೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಲಿಖಿತ ಪರೀಕ್ಷೆ
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ 545 ಹುದ್ದೆಗಳ ನೇಮಕಾತಿ ಕುರಿತಂತೆ ಲಿಖಿತ ಪರೀಕ್ಷೆಗೆ ಇಲಾಖೆ ಮುಂದಾಗಿದ್ದು, ಡಿಸೆಂಬರ್ 23ಕ್ಕೆ ಈ ಪರೀಕ್ಷೆ ನಡೆಯಲಿದೆ.
ಹೈಕೋರ್ಟ್ ಆದೇಶದ ಪ್ರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ದಿನಾಂಕವನ್ನು ನಿಗದಿಮಾಡಿದೆ.
ಇದೇ ಹುದ್ದೆಗಳಿಗೆ ಈ ಹಿಂದೆ ನಡೆದಿದ್ದ ಪರೀಕ್ಷೆಗೆ ಅರ್ಹರಾಗಿದ್ದವರು ಈ ಮರುಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.
2021ರ ಜುಲೈ 21ರಂದು 545 ಪಿಎಸ್‌ಐ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಅದೇ ವರ್ಷದ ಅಕ್ಟೋಬರ್ 3ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು.
ಈ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮ ಕಂಡುಬಂದ ಹಿನ್ನೆಲೆಯಲ್ಲಿ ಎಡಿಜಿಪಿ ಅಮೃತ್ ಪೌಲ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಹಿತ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು.
ಈ ಪ್ರಕರಣದ ವಿಚಾರಣೆ ವೇಳೆ, ಹೈಕೋರ್ಟ್ ಇದೇ ಹುದ್ದೆಗೆ ಮರು ಪರೀಕ್ಷೆ ನಡೆಸಲು ಪರೀಕ್ಷಾ ಪ್ರಾಧಿಕಾರಕ್ಕೆ ಅನುಮತಿ ನೀಡಿತ್ತು.