ಉಡುಪಿ ನಾಲ್ವರ ಬರ್ಬರ ಹತ್ಯೆ- ಆರೋಪಿ ಬಂಧನ- ಘಟನೆ ಬಗ್ಗೆ ಪೊಲೀಸರ ವಿವರಣೆ
ಉಡುಪಿ ನಾಲ್ವರ ಬರ್ಬರ ಹತ್ಯೆ- ಆರೋಪಿ ಬಂಧನ- ಘಟನೆ ಬಗ್ಗೆ ಪೊಲೀಸರ ವಿವರಣೆ
ಉಡುಪಿ ಜಿಲ್ಲೆಯ ನೇಜಾರು ಎಂಬಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ (ಪ್ರಾಯ 39 ವರ್ಷ) ಎಂಬಾತನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಬ್ಬರು ಏರ್ ಇಂಡಿಯಾದ ಸಿಬ್ಬಂದಿಯಾಗಿದ್ದು, ಆಯ್ನಾಜ್ ಮಂಗಳೂರು ಕೇಂದ್ರವಾಗಿಟ್ಟುಕೊಂಡು ಗಗನಸಖಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆಕೆಯ ಜೊತೆಗೆ ಪ್ರವೀಣ್ ಸ್ನೇಹ ಸಂಬಂಧ ಇಟ್ಟುಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ವಿವಾಹಿತನಾಗಿದ್ದು, ಮಹಾರಾಷ್ಟ್ರದಲ್ಲಿ ಕುಟುಂಬ ಸಹಿತ ನೆಲೆಸಿದ್ದ. ಆಯ್ನಾಜ್ ಅವರನ್ನು ಕೊಲೆ ಮಾಡುವ ಉದ್ದೇಶವೇನು..? ಪ್ರವೀಣ್ ಸಾಕ್ಷ್ಯ ನಾಶ ಮಾಡಿದ್ದಾನೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
ಬಂಧಿತನನ್ನು ಉಡುಪಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿ ಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಲಯವು ಆರೋಪಿಗೆ ಪೊಲೀಸ್ ಕಸ್ಟಡಿ ವಿಧಿಸಿ ಆದೇಶ ನೀಡಿದೆ.
ಸದ್ರಿ ಈ ಹತ್ಯೆ ಪ್ರಕರಣದ ತನಿಖಾಧಿಕಾರಿಯಾಗಿರುವ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರಾದ ಮಂಜುನಾಥ್ ಅವರ ನೇತೃತ್ವದಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆರೋಪಿಗೆ ನವೆಂಬರ್ 28ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಹಾಯಕ ಪಬ್ಲಿಕ್ ಪ್ರಾಸಿಕ್ಯೂಟರ್ ಎಚ್. ಎಂ. ನದಾಫ್ ಮತ್ತು ಆರೋಪಿಯ ಪರ ಸರಕಾರದಿಂದ ನೇಮಕ ಮಾಡಲಾದ ಡಿಫೆನ್ಸ್ ಕೌನ್ಸೆಲ್ ರಾಜು ಪೂಜಾರಿ ಹಾಜರಿದ್ದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಟಿ. ಸಿದ್ಧಲಿಂಗಪ್ಪ, ಡಿವೈಎಸ್ಪಿಗಳಾದ ಬೆಳ್ಳಿಯಪ್ಪ ಕೆ.ಯು., ದಿನಕರ ಕೆ.ಪಿ., ಅರವಿಂದ ಕಲಗುಜ್ಜಿ, ಪೊಲೀಸ್ ನಿರೀಕ್ಷಕರಾದ ಮಂಜಪ್ಪ, ದೇವರಾಜ್ ಅವರು ಆರೋಪಿಯ ಬಂಧನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.