-->

ಭೀಕರ‌‌ ಅಪಘಾತ- ಬಸ್ಸಿನಲ್ಲೆ 13 ಮಂದಿ ಸಜೀವ ದಹನ

ಭೀಕರ‌‌ ಅಪಘಾತ- ಬಸ್ಸಿನಲ್ಲೆ 13 ಮಂದಿ ಸಜೀವ ದಹನ



ಮಧ್ಯಪ್ರದೇಶ: ಟ್ರಕ್ ಗೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸೊಂದು  ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ಸಿನಲ್ಲಿದ್ದ ಕನಿಷ್ಠ 13 ಮಂದಿ ಸಜೀವ ದಹನಗೊಂಡ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.


 

ಗುನಾ-ಆರೋನ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ.  ಅಪಘಾತದಲ್ಲಿ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ಸಾವಿನ ಸಂಖ್ಯೆಯನ್ನು ಖಚಿತಪಡಿಸಿದ್ದು ಜೊತೆಗೆ ಗಾಯಗೊಂಡವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದ್ದಾರೆ.


ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿದ್ದು, ಅವುಗಳನ್ನು ಗುರುತಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.


ಅಪಘಾತದ ಸ್ಥಳದಿಂದ ಎಲ್ಲಾ ದೇಹಗಳನ್ನು ಹೊರತೆಗೆಯಲಾಗಿದ್ದು ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ಸಮಯದಲ್ಲಿ ಬಸ್‌ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು . ಅವರಲ್ಲಿ ನಾಲ್ವರು ಬಸ್ಸಿನಿಂದ ಜಿಗಿದು ಪಾರಾಗಿದ್ದಾರೆ.


ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಘಟನೆಯ ತನಿಖೆಗೆ ಆದೇಶಿಸಿದ್ದು ಮತ್ತು ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳನ್ನು ಘೋಷಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99