ವಿವಾದಿತ ಭಾಷಣ ಹಿನ್ನೆಲೆ- RSS ಮುಖಂಡ ಡಾ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು: ವಿಎಚ್‌ಪಿ ಖಂಡನೆ
ವಿವಾದಿತ ಭಾಷಣ ಹಿನ್ನೆಲೆ- RSS ಮುಖಂಡ ಡಾ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು: ವಿಎಚ್‌ಪಿ ಖಂಡನೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS)ದ ಪ್ರಮುಖ ಡಾ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಿರುವುದನ್ನು ವಿಶ್ವ ಹಿಂದೂ ಪರಿಷದ್ ಖಂಡಿಸಿದೆ.
ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿನ್ನೆಲೆಯಲ್ಲಿ ಡಾ ಪ್ರಭಾಕರ ಭಟ್ ಮೇಲೆ ಕೇಸು ದಾಖಲಿಸಲಾಗಿತ್ತು.
ಡಾ. ಕಲ್ಲಡ್ಕ ಅವರು ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ ಎಂಬುದಾಗಿ ವಿಎಚ್‌ಪಿ ಸಮರ್ಥಿಸಿಕೋಂಡಿದೆ.
ಕಲ್ಲಡ್ಕ ಅವರ ಬಂಧನವು ಸಂಘ ಪರಿವಾರ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಆಗಿದೆ. ಸಿಎಂ ಸಿದ್ದರಾಮಯ್ಯ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿ ಸುಳ್ಳು ಕೇಸು ದಾಖಲಿಸಲಾಗಿದೆ ಎಂದು ವಿಎಚ್‌ಪಿ ಬಣ್ಣಿಸಿದೆ.
ತಕ್ಷಣ ಭಟ್ಟರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ.