ಬಿಜೆಪಿ ಟಿಕೆಟ್ ದಂಧೆ ಪ್ರಕರಣ: ಚೈತ್ರಾ, ಶ್ರೀಕಾಂತ್‌ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಾಮೀನು
Tuesday, December 5, 2023
ಬಿಜೆಪಿ ಟಿಕೆಟ್ ದಂಧೆ ಪ್ರಕರಣ: ಚೈತ್ರಾ, ಶ್ರೀಕಾಂತ್‌ಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಜಾಮೀನು
ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಕುಂದಾಪುರದ ಚೈತ್ರಾ ಮತ್ತು ಏಳನೇ ಆರೋಪಿ ಶ್ರೀಕಾಂತ್ ಅವರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನೀಡಿದೆ.
ಚೈತ್ರಾ ಮತ್ತು ಶ್ರೀಕಾಂತ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಮೂರನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಶ್ರೇಯಾಂಕ್ ದೊಡ್ಡಮನಿ ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದ್ದಾರೆ.
ತಲಾ ಇಬ್ಬರು ಶೂರಿಟಿಗಳ ಭದ್ರತೆ ಮತ್ತು ತಲಾ ಒಂದು ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ನೀಡಬೇಕು. ಬೆಂಗಳೂರು ವ್ಯಾಪ್ತಿಯನ್ನು ಬಿಟ್ಟು ಹೊರಗೆ ಹೋಗುವಂತಿಲ್ಲ ಎಂಬ ಷರತ್ತುಗಳನ್ನು ವಿಧಿಸಲಾಗಿದೆ.