ರಾತ್ರಿಯಿಡೀ ಯಕ್ಷಗಾನ ಪ್ರದರ್ಶನಕ್ಕೆ ಹೈಕೋರ್ಟ್ ಅಸ್ತು: ತೆರವಾದ ನಿರ್ಬಂಧ
ರಾತ್ರಿಯಿಡೀ ಯಕ್ಷಗಾನ ಪ್ರದರ್ಶನಕ್ಕೆ ಹೈಕೋರ್ಟ್ ಅಸ್ತು: ತೆರವಾದ ನಿರ್ಬಂಧ
ಕೋವಿಡ್ ಪೂರ್ವದಲ್ಲಿ ಇದ್ದ ಹಾಗೆ ಇನ್ನು ಮುಂದೆ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನ ನಡೆಸಲು ಯಾವುದೇ ಅಭ್ಯಂತರ ಇಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಶಬ್ಧ ಮಾಲಿನ್ಯ ಹಾಗೂ ಇತರ ಕ್ರಮಗಳನ್ನು ಕೈಗೊಳ್ಳುವ ಷರತ್ತಿನೊಂದಿಗೆ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ ನಡೆಸಬಹುದು ಎಂದು ಸರ್ಕಾರ ಹೈಕೋರ್ಟ್‌ಗೆ ತಿಳಿಸಿದ ಹಿನ್ನೆಲೆಯಲ್ಲಿ ಕೋವಿಡ್ ಪೂರ್ವದಲ್ಲಿ ಇದ್ದ ಹಾಗೆ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನಕ್ಕೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ಶಬ್ದ ಮಾಲಿನ್ಯ ನಿಯಮ 2000 ಸೇರಿದಂತೆ ಯಾವುದೇ ನಿಯಮ ಉಲ್ಲಂಘಿಸದೆ ಯಕ್ಷಗಾನ ಪ್ರದರ್ಶನ ನಡೆಸಲಾಗುವುದು ಎಂದು ಅರ್ಜಿದಾರರು ಪ್ರಮಾಣಪತ್ರ ಸಲ್ಲಿಸಿದ್ದು, ಆ ಬಳಿಕ ಹೈಕೋರ್ಟ್ ಯಕ್ಷಗಾನ ಪ್ರದರ್ಶನಕ್ಕೆ ಷರತ್ತುಬದ್ಧ ಅನುಮತಿಯನ್ನು ನೀಡಿದೆ.
ಹೈಕೋರ್ಟ್‌ನ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಕೋವಿಡ್ ಪೂರ್ವದಲ್ಲಿ ಇದ್ದ ಹಾಗೆ ರಾತ್ರಿ ಇಡೀ ಯಕ್ಷಗಾನ ಪ್ರದರ್ಶನ ನಡೆಸಲು ಜಿಲ್ಲಾಧಿಕಾರಿ ಅಥವಾ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕು. ಅರ್ಜಿದಾರರು ನಿಯಮ ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸ್ವತಂತ್ರರಾಗಿರುತ್ತಾರೆ ಎಂದು ಹೈಕೋರ್ಟ್ ನ್ಯಾಯಪೀಠ ಅರ್ಜಿದಾರರಿಗೆ ಆದೇಶದಲ್ಲಿ ತಿಳಿಸಿದೆ.