ರಾಮ ಮಂದಿರ ಉದ್ಘಾಟನೆ- ದೇವರ ಹೆಸರಲ್ಲಿ ರಾಜಕೀಯ ಬೇಡ: ಗೌರವಪೂರ್ವಕ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್
ರಾಮ ಮಂದಿರ ಉದ್ಘಾಟನೆ- ದೇವರ ಹೆಸರಲ್ಲಿ ರಾಜಕೀಯ ಬೇಡ: ಗೌರವಪೂರ್ವಕ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್
ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ನೀಡಿದ ಆಹ್ವಾನವನ್ನು ಕಾಂಗ್ರೆಸ್ ಗೌರವಪೂರ್ವಕವಾಗಿ ತಿರಸ್ಕರಿಸಿದೆ.
ದೇವರ ಹೆಸರಲ್ಲಿ ರಾಜಕೀಯ ಬೇಡ. ಇದು ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ತನ್ನ ರಾಜಕೀಯಕ್ಕಾಗಿ ಬಳಸಿಕೊಂಡ ಯೋಜನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ದೇಶದಲ್ಲಿ ಕೋಟಿಗಟ್ಟಲೆ ಮಂದಿ ಶ್ರೀರಾಮನನ್ನು ಪೂಜಿಸುತ್ತಾರೆ. ಧರ್ಮಯು ವೈಯಕ್ತಿಕ ವಿಚಾರ. ರಾಜಕೀಯ ಲಾಭಕ್ಕಾಗಿ ಅಪೂರ್ಣಗೊಂಡಿರುವ ಮಂದಿರದ ಉದ್ಘಾಟನೆಯನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುತುವರ್ಜಿಯಿಂದ ಮಾಡುತ್ತಿದೆ ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ಆಕ್ಷೇಪಿಸಿದೆ.
ಸುಪ್ರೀಂ ಕೋರ್ಟ್‌ನ 2019ರ ತೀರ್ಪಿಗೆ ಬದ್ಧರಾಗಿ ಮತ್ತು ರಾಮನನ್ನು ಪೂಜಿಸುವ ಜನರ ಭಾವನೆಗಳನ್ನು ಗೌರವಿಸಿ ಈ ಆಹ್ವಾನವನ್ನು ಗೌರವಪೂರ್ವಕವಾಗಿ ತಿರಸ್ಕರಿಸುತ್ತಿದ್ದೇವೆ ಎಂದು ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ತಮ್ಮ ಆಹ್ವಾನವನ್ನು ತಿರಸ್ಕರಿಸಿದ್ದಾರೆ.