ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ್ ಹೆಗ್ಡೆ ನಿಧನ
Tuesday, January 16, 2024
ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ್ ಹೆಗ್ಡೆ ನಿಧನ
ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ. ರಮಾನಾಥ ಹೆಗ್ಡೆ ಅವರು ದೈವಾಧೀನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ಶ್ರೀ ಮಂಗಳಾದೇವಿ ದೇವಸ್ಥಾನ ಮಂಗಳೂರು, ಕಳೆದ 31 ವರ್ಷಗಳಿಂದ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿರುವ ಅವರು ಅಪಾರ ಅಭಿಮಾನಿ ಬಂಧುಗಳನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ಬಿ. ರಮಾನಾಥ ರೈ, ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.