ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲೈಂಗಿಕ ಕಿರುಕುಳ: ಟೈಪಿಸ್ಟ್‌ನಿಂದ ಪೊಲೀಸರಿಗೆ ದೂರು
Sunday, January 7, 2024
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಲೈಂಗಿಕ ಕಿರುಕುಳ: ಟೈಪಿಸ್ಟ್‌ನಿಂದ ಪೊಲೀಸರಿಗೆ ದೂರು
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ಟೈಪಿಸ್ಟ್ ಮಹಿಳಾ ಸಿಬ್ಬಂದಿ ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸರಿಗೆ ದೂರು ನೀಡಿದ್ಧಾರೆ.
ಮೂಡ ಕಚೇರಿಯಲ್ಲಿ ಹೊರ ಗುತ್ತಿಗೆ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬೆರಳಚ್ಚು ಉದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯ ಆರೋಪದ ಮಾಡಿ ದೂರು ಸಲ್ಲಿಸಿದ್ದಾರೆ.
ಮೂಡ ಆಯುಕ್ತ ಮನ್ಸೂರ್ ಅಲಿ ಅವರು ತಮಗೆ ಲೈಂಗಿಕ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿದೆ.
ಜನವರಿ 6ರಂದು ಮಹಿಳೆ ದೂರು ನೀಡಿದ್ದು, ಭಾರತೀಯ ದಂಡ ಸಂಹಿತೆ 354, 354A ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.