ಆಪರೇಷನ್ ಥಿಯೇಟರ್ ಅಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್: ಹೊರಗುತ್ತಿಗೆ ವೈದ್ಯನನ್ನು ವಜಾ ಮಾಡಿದ ಡಿಸಿ
ಆಪರೇಷನ್ ಥಿಯೇಟರ್ ಅಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್: ಹೊರಗುತ್ತಿಗೆ ವೈದ್ಯನನ್ನು ವಜಾ ಮಾಡಿದ ಡಿಸಿ
ವೈದ್ಯನಬ್ಬ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಚಿತ್ರೀಕರಣ ಮಾಡಿ ತನ್ನ ಕೆಲಸಕ್ಕೆ ಸಂಚಕಾರ ತಂದುಕೊಂಡಿದ್ದಾನೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ. ಅಭಿಷೇಕ್ ವಜಾಗೊಂಡ ವೈದ್ಯ.
ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರಗುತ್ತಿಗೆ ವೈದ್ಯನನ್ನು ಕರ್ತವ್ಯದಿಂದ ವಜಾ ಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಭರಮಸಾಗರದ ಆಸ್ಪತ್ರೆಯಲ್ಲಿ ಈ ಪ್ರೀ-ಶೂಟಿಂಗ್ ಘಟನೆ ನಡೆದಿದೆ. ಆರೋಪಿ ವೈದ್ಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಡಾಕ್ಟರ್ ಅಭಿಷೇಕ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಭರಮಸಾಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಶಸ್ತ್ರ ಚಿಕಿತ್ಸೆ ಕೊಠಡಿಯಲ್ಲಿ ತನ್ನ ಭಾವೀ ಪತ್ನಿಯ ಜೊತೆ ವೈದ್ಯ ಪ್ರೀ ವೆಡ್ ಶೂಟ್ ಮಾಡಿದ್ದರು. ಈ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ಮತ್ತು ಸುದ್ಧಿಮಾಧ್ಯಮದಲ್ಲಿ ಪ್ರಸಾರವಾಗಿತ್ತು.
ಇಂಥ ಕಾರ್ಯವು ನಿಯಮ ಬಾಹಿರವಾಗಿದ್ದು ವೈದ್ಯರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಈ ಬಗ್ಗೆ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳ ವರದಿಯನ್ನು ಆಧರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಡಾಕ್ಟರ್ ಅಭಿಷೇಕ್ ಅವರನ್ನು ಕರ್ತವ್ಯದಿಂದ ವಜಾ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಜಿ ಅವರು ತಿಳಿಸಿದ್ದಾರೆ