ಲಂಚಕ್ಕೆ ಕೈ ಚಾಚಿದ ಭ್ರಷ್ಟ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, 12 ಸಾವಿರ ದಂಡ
ಲಂಚಕ್ಕೆ ಕೈ ಚಾಚಿದ ಭ್ರಷ್ಟ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ, 12 ಸಾವಿರ ದಂಡ
ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಭ್ರಷ್ಟ ಗ್ರಾಮ ಲೆಕ್ಕಾಧಿಕಾರಿಗೆ ಎರಡು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 12 ಸಾವಿರ ದಂಡ ವಿಧಿಸಿ ಕಾರವಾರ ಜಿಲ್ಲಾ ಸಚಿನ್ ನ್ಯಾಯಾಲಯ ತೀರ್ಪು ನೀಡಿದೆ.
ಜಮೀನು ವಾಂಟಣೆ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಭಜಂತ್ರಿ ಲಂಚ ಪಡೆದಿದ್ದ. ಈತನಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಅಡಿ ಎರಡು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 12,000 ದಂಡ ವಿಧಿಸಿ ಕಾರವಾರ ಜಿಲ್ಲಾ ಸಚಿನ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಕುಮಟ ತಾಲೂಕಿನ ಹೆಗಡೆ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಕರ್ತವ್ಯದಲ್ಲಿ ಇದ್ದಾಗ ಗಂಗಾ ಕೋಡಿಯ ಎಂಬವರ ಜಮೀನನ್ನು ಅವರ ಮಕ್ಕಳ ಹೆಸರಿಗೆ ವರ್ಗಾಯಿಸಿಕೊಡಲು ಈತ 20 ಸಾವಿರ ರೂ.ಗಳ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದ.
ಅರ್ಜಿದಾರರಿಂದ ಈತ ಹಣ ಪಡೆದುಕೊಳ್ಳುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದ. ಬಳಿಕ ತನಿಖೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಈ ಬಗ್ಗೆ ದೋಷ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದರು. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಲಕ್ಷ್ಮಿಕಾಂತ ಪ್ರಭು ವಾದ ಮಂಡಿಸಿದರು.