ಚುನಾವಣೆಗೆ ಕೈ ತಯಾರಿ: ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೀಟಿಂಗ್
ಚುನಾವಣೆಗೆ ಕೈ ತಯಾರಿ: ಮಂಗಳೂರಿನಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮೀಟಿಂಗ್
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜಗೊಳ್ಳುತ್ತಿದೆ. ಕರಾವಳಿಯಲ್ಲೂ ಕೈ ನಾಯಕರು ತೀವ್ರ ಕಸರತ್ತು ಆರಂಭಿಸಿದ್ದು ಮೀಟಿಂಗ್ ಹಾಗೂ ನಾಯಕರ ಮನೋಸಂಕಲ್ಪ ಹೆಚ್ಚಿಸುವ ಕೆಲಸ ಮಾಡುತ್ತಿದ್ಧಾರೆ.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ವಿವಿಧ 20 ಮುಂಚೂಣಿ ಘಟಕಗಳ ಪದಾಧಿಕಾರಿಗಳ ಪ್ರತ್ಯೇಕ ಸಭೆ ಕರೆದು ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದರು.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರೋಜಿ ಜಾನ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ.ಬಾವ, ಮಿಥುನ್ ರೈ, ಇನಾಯತ್ ಅಲಿ, ಮಮತಾ ಗಟ್ಟಿ, ಕೃಪಾ ಆಳ್ವ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ಮುಖಂಡರಾದ ಕಣಚೂರು ಮೋನು, ಭರತ್ ಮುಂಡೋಡಿ ಮತ್ತಿತರರು ಉಪಸ್ಥಿತರಿದ್ದರು.
ಸಭೆಯ ಬಳಿಕ ಮಾಧ್ಯಮ ಹೇಳಿಕೆ : ವೀಡಿಯೋ