-->

"ಯುವನಿಧಿ" ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ನಿಯಮ ಪಾಲಿಸದಿದ್ದರೆ ನಗದು ವರ್ಗಾವಣೆ ಇಲ್ಲ!

"ಯುವನಿಧಿ" ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ನಿಯಮ ಪಾಲಿಸದಿದ್ದರೆ ನಗದು ವರ್ಗಾವಣೆ ಇಲ್ಲ!

"ಯುವನಿಧಿ" ಫಲಾನುಭವಿಗಳಿಗೆ ಮಹತ್ವದ ಸೂಚನೆ: ಈ ನಿಯಮ ಪಾಲಿಸದಿದ್ದರೆ ನಗದು ವರ್ಗಾವಣೆ ಇಲ್ಲ!






ಕರ್ನಾಟಕ ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯದ ಯುವನಿಧಿ ಯೋಜನೆಯಲ್ಲಿ ಅರ್ಹ ಫಲಾನುಭವಿಗಳು ಇನ್ನು ಮುಂದೆ ಸ್ವಯಂ ಘೋಷಣೆ ಮಾಡಬೇಕು ಎಂಬ ನಿಯಮವನ್ನು ಜಾರಿಗೆ ತರಲಾಗಿದೆ


2022-23 ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಈ ಸ್ವಯಂ ಘೋಷಣೆ ನಿಯಮವನ್ನು ಜಾರಿಗೊಳಿಸಲಾಗಿದೆ.

ಶೈಕ್ಷಣಿಕ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸ ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿರುತ್ತದೆ.


ಅಭ್ಯರ್ಥಿಗಳು ಯುವ ನಿಧಿ ಯೋಜನೆಯ ಪ್ರಯೋಜನ ಪ್ರತಿ ತಿಂಗಳು ಪಡೆಯಬೇಕಿದ್ದರೆ ತಾನು ನಿರುದ್ಯೋಗಿ ಎಂಬ ಘೋಷಣೆಯನ್ನು ಪ್ರತಿ ತಿಂಗಳು ಮಾಡಬೇಕಾಗಿರುತ್ತದೆ. ಸ್ವಯಂ ಉದ್ಯೋಗಿ ಅಲ್ಲ, ವ್ಯಾಸಂಗ ಮುಂದುವರಿಸುತ್ತಿಲ್ಲ ಮತ್ತು ತಾನು ನಿರುದ್ಯೋಗಿ ಎಂಬ ಘೋಷಣೆಯನ್ನು ಮಾಡಬೇಕಾಗಿದೆ.


ಪ್ರಸಕ್ತ ಫೆಬ್ರವರಿ ತಿಂಗಳ 29 ರವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದೇ ಇದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ


ಈಗಾಗಲೇ ನೋಂದಾವಣೆ ಮಾಡಿಕೊಂಡ ಎಲ್ಲ ಅಭ್ಯರ್ಥಿಗಳಿಗೆ ಜನವರಿ 2024 ರಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದೆ. ಮುಂದಿನ ತಿಂಗಳ ಪ್ರಯೋಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿರುವ ಕುರಿತು ಎಲ್ಲಾ ಅಭ್ಯರ್ಥಿಗಳಿಗೆ ಈಗಾಗಲೇ ಎಸ್ಎಂಎಸ್ ಸಂದೇಶ ರವಾನಿಸಲಾಗಿದೆ.


ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್ಸೈಟನ್ನು ಸಂಪರ್ಕಿಸಬಹುದು:

https://sevasindhugs.karnataka.gov.in/


Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99