ಹಳೆ ಪಿಂಚಣಿ ಪದ್ದತಿ ಜಾರಿಗೆ ರಾಜ್ಯ ಸರ್ಕಾರ ಬದ್ಧ: ಸರ್ಕಾರಿ ನೌಕರರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್
Sunday, March 3, 2024
ಹಳೆ ಪಿಂಚಣಿ ಪದ್ದತಿ ಜಾರಿಗೆ ರಾಜ್ಯ ಸರ್ಕಾರ ಬದ್ಧ: ಸರ್ಕಾರಿ ನೌಕರರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್
ರಾಜ್ಯದಲ್ಲಿ ಹಳೆ ಪಿಂಚಣಿ ಪದ್ದತಿಯನ್ನು ಜಾರಿಗೆ ತರಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸರ್ಕಾರಿ ನೌಕರರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.
ಧಾರವಾಡದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯ ಸರ್ಕಾರ ನೂತನ ಪಿಂಚಣಿ ಪದ್ಧತಿಯನ್ನು ವಾಪಸ್ ಪಡೆದು ಹಳೆಯ ಪಿಂಚಣಿ ಪದ್ಧತಿಯನ್ನು ಜಾರಿಗೊಳಿಸುವ ಭರವಸೆ ನೀಡಿದೆ. ಅದನ್ನು ಜಾರಿಗೊಳಿಸಲು ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಓಪಿಎಸ್ ನ್ನು ಜಾರಿಗೆ ತರಲು ಕಾಲಾವಕಾಶ ಬೇಕಾಗಿದೆ. ಆಡಳಿತದ ಮಟ್ಟದಲ್ಲಿ ಅದನ್ನು ಜಾರಿಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಅವರು ಸರ್ಕಾರಿ ನೌಕರರಿಗೆ ತಿಳಿಸಿದರು.