
ಅರವಿಂದ ಕೇಜ್ರೀವಾಲ್ ಬಂಧನ: ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ಬುಧವಾರ ವಿಚಾರಣೆ
ಅರವಿಂದ ಕೇಜ್ರೀವಾಲ್ ಬಂಧನ: ದೆಹಲಿ ಹೈಕೋರ್ಟ್ ಜಾಮೀನು ಅರ್ಜಿ ಬುಧವಾರ ವಿಚಾರಣೆ
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಬುಧವಾರ ನಡೆಸಲಿದೆ.
ನ್ಯಾ. ಸ್ವರ್ಣಕಾಂತ ಶರ್ಮಾ ಬೆಳಿಗ್ಗೆ 10-30ಕ್ಕೆ ಅರ್ಜಿ ವಿಚಾರಣೆ ನಡೆಸಲಿದ್ದಾರೆ. ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ED) ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ವಿಚಾರಣಾ ನ್ಯಾಯಾಲಯ ತಮ್ಮನ್ನು ಇಡಿ ವಶಕ್ಕೆ ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
ಆದರೆ, ತುರ್ತು ವಿಚಾರಣೆ ಕೋರಿ ಮಾಡಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಕಳೆದ ಶನಿವಾರ ನಿರಾಕರಿಸಿತ್ತು.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ತೆಲಂಗಾಣದ ಮಾಜಿ ಸಿಎಂ ಕೆಸಿಆರ್ ಪುತ್ರಿ ಕೆ.ಕವಿತಾ ಅವರನ್ನು ಬಂಧಿಸಲಾಗಿದೆ.