-->

ಮಾಧ್ಯಮಗಳನ್ನು ನಾಯಿ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ: ಬಿಜೆಪಿಗೆ ಪತ್ರ ಬರೆದ ಪತ್ರಕರ್ತರ ಸಂಘ

ಮಾಧ್ಯಮಗಳನ್ನು ನಾಯಿ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ: ಬಿಜೆಪಿಗೆ ಪತ್ರ ಬರೆದ ಪತ್ರಕರ್ತರ ಸಂಘ

ಮಾಧ್ಯಮಗಳನ್ನು ನಾಯಿ ಎಂದ ಸಂಸದ ಅನಂತ್ ಕುಮಾರ್ ಹೆಗ್ಡೆ: ಬಿಜೆಪಿಗೆ ಪತ್ರ ಬರೆದ ಪತ್ರಕರ್ತರ ಸಂಘ

ಮಾಧ್ಯಮಗಳನ್ನು ಹೀನಾಯ ರೀತಿಯಲ್ಲಿ 'ನಾಯಿ' ಎಂದು ಸಂಬೋಧಿಸಿದ ಅನಂತ್ ಕುಮಾರ್ ಗೆ ಸಂಕಷ್ಟ ಎದುರಾಗಿದೆ.


ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ.


ಜೊತೆಗೆ ಅನಂತ್ ಕುಮಾರ್ ಹೆಗಡೆ ತನ್ನ ಹೇಳಿಕೆಗೆ ಬೇಸರ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಬರೆದಿರುವ ಪತ್ರದಲ್ಲಿ ಪತ್ರಕರ್ತರ ಸಂಘ ಒತ್ತಾಯಿಸಿದೆ.


ಅನಂತ್ ಕುಮಾರ್ ಹೆಗಡೆ ಹೇಳಿಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡ ಅವರಿಗೆ ಪತ್ರ ಬರೆದಿರುವ ಕರ್ನಾಟಕ ಕಾರ್ಯನಿರ್ತಾ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಇಂತಹ ಬೇ ಜವಾಬ್ದಾರಿ ಹೇಳಿಕೆ ನೀಡುವ ಸಂಸದರ ವಿರುದ್ಧ ಬಿಜೆಪಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಅನಂತ್ ಕುಮಾರ್ ಹೆಗಡೆ ಬೇಸರತ್ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ


ಪತ್ರದಲ್ಲಿ ಏನಿದೆ

ಉತ್ತರ ಕನ್ನಡದ ಸಂಸದ ಅನಂತ್ ಕುಮಾರ್ ಹೆಗಡೆ ಅಂಕೋಲಾ ತಾಲೂಕಿನ ಗ್ರಾಮ ಒಂದರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.


"ಆನೆ ನಡೆದದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ.. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ" ಎಂದು ಮಾಧ್ಯಮದವರನ್ನು ಹೀಯಾಳಿಸಿದ್ದಾರೆ.


ಇದು ಖಂಡನೀಯ ಕೂಡಲೇ ಅವರು ಬಹಿರಂಗವಾಗಿ ಬೇಸರ ಕ್ಷಮೆ ಯಾಚಿಸಬೇಕು ಎಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸುತ್ತಿದೆ.


ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ ತಮಗೆ ಬೇಕಾದಾಗ ಮಾಧ್ಯಮಗಳನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತಕುಮಾರ್ ಹೆಗಡೆಯವರು ಜವಾಬ್ದಾರಿಯುತ ಸಂಸದರಾಗಿದ್ದಾರೆ ಆಗಿಂದಾಗೆ ಮನಸ್ಸು ಇಚ್ಛೆ ಮಾತನಾಡುತ್ತಿದ್ದಾರೆ.


ಅಲ್ಲದೆ ಮಾಧ್ಯಮವನ್ನು ಗುರಿಯಾಗಿರಿಸಿ ಹೇಳಿಕೆ ನೀಡಿರುವುದು ಇದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಅವರ ಮೇಲೆ ಕ್ರಮ ಜರುಗಿಸಬೇಕು.


ನಾಲಿಗೆ ಮೇಲೆ ಹಿಡಿತವಿಲ್ಲದ ಇಂಥವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99