ಅಂಚೆ ಮತದಾನ ಪ್ರಕ್ರಿಯೆ: ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಏಜೆಂಟ್- ದೃಶ್ಯಾವಳಿ ಸಹಿತ ದೂರು ನೀಡಿದ ಕಾಂಗ್ರೆಸ್
Saturday, April 13, 2024
ಅಂಚೆ ಮತದಾನ ಪ್ರಕ್ರಿಯೆ: ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಏಜೆಂಟ್- ದೃಶ್ಯಾವಳಿ ಸಹಿತ ದೂರು ನೀಡಿದ ಕಾಂಗ್ರೆಸ್
ಅಂಚೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಚುನಾವಣಾಧಿಕಾರಿಗಳ ಜೊತೆಗೆ ಬಿಜೆಪಿ ಏಜೆಂಟ್ ಒಬ್ಬರು ಸಾಥ್ ನೀಡಿರುವ ಘಟನೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳ ತಂಡವು ಮನೆ ಮನೆಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಏಜೆಂಟ್ ಆಗಿರುವ ವ್ಯಕ್ತಿಯೊಬ್ಬರು ಈ ತಂಡದೊಂದಿಗೆ ಮನೆ ಮನೆಗೆ ತೆರಳಿ ತನ್ನದೇ ಕಾರ್ಯ ಮಾಡುತ್ತಿದ್ದ ಎನ್ನಲಾಗಿದೆ.
ಈ ಬಗ್ಗೆ ದೃಶ್ಯಾವಳಿ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ಸೂಕ್ತ ಕ್ರಮ ಜರುಗಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.