ಚುನಾವಣೆಗೆ ಮುನ್ನವೇ ಶಾಕ್ ನೀಡಿದ ವೀರಪ್ಪ ಮೊಯ್ಲಿ: ಕೈ ಹೈಕಮಾಂಡ್ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು..?
ಚುನಾವಣೆಗೆ ಮುನ್ನವೇ ಶಾಕ್ ನೀಡಿದ ವೀರಪ್ಪ ಮೊಯ್ಲಿ: ಕೈ ಹೈಕಮಾಂಡ್ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು..?
ಲೋಕಸಭಾ ಚುನಾವಣೆಯ ಹೊತ್ತಲ್ಲೇ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಎಂ. ವೀರಪ್ಪ ಮೊಯ್ಲಿ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲೇ ಅವರು ಈ ಘೋಷಣೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಭಾಷಣ ಮಾಡಿದ ಅವರು ಇದೀಗ, ರಕ್ಷಾ ರಾಮಯ್ಯ ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ.
1972ರಿಂದ ರಾಜಕೀಯದಲ್ಲಿ ಇರುವ ವೀರಪ್ಪ ಮೊಯಿಲಿ, 1992ರಿಂದ 94ರ ವರೆಗೆ ಕರ್ನಾಟಕದ 13ನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.
ರಾಜಕಾರಣದ ಜೊತೆಗೆ ಸಾಹಿತ್ಯದಲ್ಲೂ ಗುರುತಿಸಿಕೊಂಡಿರುವ ಅವರು, ತಮ್ಮ ಮಹಾ ಕಾವ್ಯಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೂ ಭಾಜನರಾಗಿದ್ದಾರೆ.