
ಅನಿರೀಕ್ಷಿತ ಘಟನೆ: ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು
Monday, April 1, 2024
ಅನಿರೀಕ್ಷಿತ ಘಟನೆ: ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ಶೂಟಿಂಗ್ ಸಂದರ್ಭದಲ್ಲೇ ಸುಸ್ತು ಕಾಣಿಸಿಕೊಂಡ ಕಾರಣ ಅವರು ಆಸ್ಪತ್ರೆಗೆ ದಾಖಲಾದರು.
ಶೂಟಿಂಗ್ ಸೆಟ್‌ನಲ್ಲಿ ಧೂಳಿನ ಸಮಸ್ಯೆಯಿಂದಾಗಿ ಅನಾರೋಗ್ಯ ಉಂಟಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಕೇವಲ ಸಾಮಾನ್ಯ ಚೆಕ್‌ಅಪ್‌ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತರು ಹೇಳಿದ್ದಾರೆ. ಈಗ ಅವರ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ. ಒಂದೆರಡು ಗಂಟೆಗಳ ನಿಗಾ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ಹೇಳಿದ್ದಾರೆ.