ಅಧಿಕಾರ ದುರುಪಯೋಗ ಮಾಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಸೇವೆಯಿಂದ ವಜಾ
ಅಧಿಕಾರ ದುರುಪಯೋಗ ಮಾಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಸೇವೆಯಿಂದ ವಜಾ
13 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಆರೋಪಿಯನ್ನು ಕಾನೂನಾತ್ಮಕವಾಗಿ ರಕ್ಷಿಸಿದ್ದ ಹಾಗೂ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿ ಅಧಿಕಾರ ದುರುಪಯೋಗ ಮಾಡಿದ್ದ ಪೊಲೀಸ್ ವರಿಷ್ಠಾಧಿಕಾರಿ ಸೇವೆಯಿಂದ ವಜಾ ಮಾಡಲಾಗಿದೆ.
ಅಸ್ಸಾಂ ರಾಜ್ಯದ ದರಂಗ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಮೋಹನ್ ರಾಯ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಈ ಅಧಿಕಾರಿ ಭವಿಷ್ಯದಲ್ಲಿಯೂ ಉದ್ಯೋಗಕ್ಕೆ ಸೇರದಂತೆ ಅನರ್ಹಗೊಳಿಸಲಾಗಿದೆ ಎಂದು DGP ಶ್ರೀ G.P. ಸಿಂಗ್ ಆದೇಶ ಹೊರಡಿಸಿದ್ದಾರೆ.
2022ರಲ್ಲಿ ಮನೆ ಕೆಲಸಕ್ಕೆ ಇದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಕೃಷ್ಣ ಕಮಾಲ್ ಎಂಬಾತ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಈ ಆರೋಪಿಯನ್ನು ರಕ್ಷಿಸಲುಪೊಲೀಸ್ ವರಿಷ್ಠಾಧಿಕಾರಿ, ಕಾರ್ಯಕಾರಿ ಮ್ಯಾಜಿಸ್ಟ್ರೇಟ್, ವೈದ್ಯರು ಹಾಗೂ ಇತರೆ ಅಧಿಕಾರಿಗಳು ಪ್ರಯತ್ನಿಸಿದ್ದರು. ಈ ಪ್ರಕರಣವನ್ನು ಅತ್ಯಾಚಾರಕ್ಕೆ ಬದಲಾಗಿ ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದರು.
ಬಳಿಕ, ಈ ಪ್ರಕರಣವನ್ನು ಅಸ್ಸಾಂ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು ಅತ್ಯಾಚಾರ ಪ್ರಕರಣದ ಆರೋಪಿಯನ್ನು ರಕ್ಷಿಸಲು ಯತ್ನಿಸಿದ್ದ ಎಲ್ಲ ಅಧಿಕಾರಿಗಳನ್ನು ಬಂಧಿಸಿದ್ದರು.
ಇದೀಗ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಮೋಹನ್ ರಾಯ್ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ವ್ಯವಸ್ಥೆಯನ್ನು ದುರ್ಬಳಕೆ ಮಾಡಿ ಅಧಿಕಾರ ದುರುಪಯೋಗ ಮಾಡುವ ಯಾವುದೇ ಕ್ರಮವನ್ನು ಸಹಿಸಿಕೊಳ್ಳುವುದಿಲ್ಲ ಎಂದು ಡಿಜಿಪಿ ತನ್ನ ಆದೇಶದಲ್ಲಿ ತಿಳಿಸಿದ್ದಾರೆ.