
ಮಹಾಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ: EXIT POLLಗೆ ಸಮೀಕ್ಷೆಗೆ ಕಾಂಗ್ರೆಸ್ ಬಹಿಷ್ಕಾರ
Saturday, June 1, 2024
ಮಹಾಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ: EXIT POLLಗೆ ಸಮೀಕ್ಷೆಗೆ ಕಾಂಗ್ರೆಸ್ ಬಹಿಷ್ಕಾರ
2024ರ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೊನೆ ಹಂತದ ಚುನಾವಣೆಗೆ ಕೆಲವೇ ಗಂಟೆಗಳಿರುವಾಗ ತಾನು ಚುನಾವಣೋತ್ತರ ಫಲಿತಾಂಶ (EXIT POLL) ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಘೋಷಿಸಿದೆ.
ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ X ಸಾಮಾಜಿಕ ಜಾಲತಾಣದ ವೇದಿಕೆಯಲ್ಲಿ ಈ ವಿಷಯವನ್ನು ದೃಢಪಡಿಸಿದ್ದಾರೆ.
ತನ್ನೆಲ್ಲ ಕಾರ್ಯಕರ್ತರಿಗೆ ಈ ಬಗ್ಗೆ ಸಂದೇಶ ನೀಡಿದ ಕಾಂಗ್ರೆಸ್ ನಾಯಕರು, ಮತಪೆಟ್ಟಿಗೆಯ ಭದ್ರತೆ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಮನವಿ ಮಾಡಿದೆ.
ಇದೇ ವಿಷಯವನ್ನು ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಜನತಾದಳ ಪುನರುಚ್ಚರಿಸಿದೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ರಾಷ್ಟ್ರೀಯ ಜನತಾದಳದ ತೇಜಸ್ವಿ ಯಾದವ್ ತನ್ನ ಕಾರ್ಯಕರ್ತರಿಗೆ ಮತಯಂತ್ರದ ಬಗ್ಗೆ ನಿಗಾ ಇಡುವಂತೆ ಸೂಚನೆ ನೀಡಿದೆ.