ಲೋಕಸಭಾ ಸದಸ್ಯರಾಗಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಂಸದರಾಗಿ ಪ್ರಮಾಣವಚನ
Wednesday, June 26, 2024
ಲೋಕಸಭಾ ಸದಸ್ಯರಾಗಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಂಸದರಾಗಿ ಪ್ರಮಾಣವಚನ
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದ ತಮಿಳುನಾಡಿನ ಸಸಿಕಾಂತ್ ಸೆಂಥಿಲ್ ಅವರು ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರಿದ್ದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವಾರ್ ರೂಮ್ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.
ಅವರು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಭರ್ಜರಿ ಮತಗಳ ಅಂತರದಿಂದ ಚುನಾಯಿತರಾಗಿದ್ದರು.