ದಕ್ಷಿಣ ಕನ್ನಡ ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಉದ್ಯೋಗಾವಕಾಶ
Sunday, June 9, 2024
ದಕ್ಷಿಣ ಕನ್ನಡ ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಉದ್ಯೋಗಾವಕಾಶ
ದಕ್ಷಿಣ ಕನ್ನಡ ಜಿಲ್ಲಾ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಉದ್ಯೋಗಾವಕಾಶ ಒದಗಿಬಂದಿದೆ. ನೀರಿನ ಮಾದರಿ ಸಂಗ್ರಹಕಾರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 50ಕ್ಕಿಂತ ಹೆಚ್ಚು ಅಂಕ ಗಳಿಸಿದ 35 ವರ್ಷದೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೊರಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಈ ನೇಮಕಾತಿ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 12, 2024.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0824-2951583 ಯನ್ನು ಸಂಪರ್ಕಿಸಲು ಕೋರಲಾಗಿದೆ.