ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ
ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದಿಂದ
ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಸ್ತ, ಅಂಬಿಗ/ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪಜಾತಿಗಳ ಅರ್ಹ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್
http://ambigaradevelopment.karnataka.gov.in, ದೂ.ಸಂಖ್ಯೆ:080-22864099, ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಜಿಲ್ಲಾ ಕಚೇರಿ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.