-->
ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಹರಿಂದ ಅರ್ಜಿ ಆಹ್ವಾನ





ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ವಿವಿಧ ಹಾಸ್ಟೆಲ್‌ ಮತ್ತು ವಸತಿ ನಿಲಯಗಳಲ್ಲಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದು.


ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ಮೂಲಕ ಸಾಮಾನ್ಯ ಪದವಿ ಮಟ್ಟದ ಕೋರ್ಸುಗಳ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಸೆಪ್ಟಂಬರ್ 12 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ, ಮಣಿಪಾಲ, ಉಡುಪಿ ದೂ.ಸಂ: 0820-2573596, ಸಹಾಯವಾಣಿ ಸಂಖ್ಯೆ: 8277799990 ಅಥವಾ ಕಾರ್ಕಳ ದೂ.ಸಂಖ್ಯೆ: 08258- 231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Ads on article

Advertise in articles 1

advertising articles 2

Advertise under the article