Udupi: 09-08-2024ರಂದು ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ
Udupi: 09-08-2024ರಂದು ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರ ಇರುವ ಬಯೋಡೇಟಾ (ರೆಸ್ಯೂಮ್/ಸಿವಿ) ಹಾಗೂ ಆಧಾರ್ ಕಾರ್ಡ್ ಪ್ರತಿ ಸಹಿತ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.