-->

ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ

ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವಿವಿಧ ಯೋಜನೆ : ಅರ್ಜಿ ಆಹ್ವಾನ





ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿವಿಧ ಯೋಜನೆಗಳ ಲಾಭವನ್ನು ಬಳಸಿಕೊಳ್ಳಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ವಿವಿಧ ಯೋಜನೆಯ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಅಟಲ್ ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

(ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ)


ನಿಗಮದಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶಿ ವ್ಯಾಸಾಂಗಕ್ಕೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.


ಹೆಚ್ಚಿನ ಮಾಹಿತಿಗಾಗಿ ನಿಗಮದ ಕೇಂದ್ರ ಕಚೇರಿಯ ದೂ.ಸಂಖ್ಯೆ: 080-22374848, 7899899039 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99