-->

ರಾಜ್ಯ ಸರ್ಕಾರದಿಂದ ಬೃಹತ್ ಸಾಲ ಸೌಲಭ್ಯ ಯೋಜನೆ ಘೋಷಣೆ: ಸುಲಭದಲ್ಲೇ ಸಾಲ- ಅರ್ಹರಿಗೆ ಸುವರ್ಣಾವಕಾಶ

ರಾಜ್ಯ ಸರ್ಕಾರದಿಂದ ಬೃಹತ್ ಸಾಲ ಸೌಲಭ್ಯ ಯೋಜನೆ ಘೋಷಣೆ: ಸುಲಭದಲ್ಲೇ ಸಾಲ- ಅರ್ಹರಿಗೆ ಸುವರ್ಣಾವಕಾಶ

ಸರ್ಕಾರದಿಂದ ಬೃಹತ್ ಸಾಲ ಸೌಲಭ್ಯ ಯೋಜನೆ ಘೋಷಣೆ: ಸುಲಭದಲ್ಲೇ ಸಾಲ- ಅರ್ಹರಿಗೆ ಸುವರ್ಣಾವಕಾಶ







ರಾಜ್ಯ ಸರ್ಕಾರದಿಂದ ಬೃಹತ್ ಸಾಲ ಸೌಲಭ್ಯ ಯೋಜನೆಯನ್ನು ಘೋಷಣೆ ಮಾಡಿದ್ದು, ಹಿಂದುಳಿದ ಯಾ ಆಯ್ದ ಸಮುದಾಯದ ಅರ್ಹ ಫಲಾನುಭವಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ.


ಈ ಬೃಹತ್ ಸಾಲ ಸೌಲಭ್ಯದ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಲು ಯುವ ಸಮುದಾಯಕ್ಕೆ ಆಹ್ವಾನ ನೀಡಲಾಗಿದ್ದು, ಅರ್ಹ ಫಲಾನುಭವಿಗಳು ಆನ್‌ಲೈನಿನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಈ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಶೈಕ್ಷಣಿಕ ಸಾಲ ಯೋಜನೆಗೆ ಕೊನೆ ದಿನಾಂಕ ಇರುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ ಸಂಖ್ಯೆ: 8867537799, ದೂ.ಸಂಖ್ಯೆ: 080-29903994 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದೂ.ಸಂಖ್ಯೆ: 0820- 2574882 ಹಾಗೂ ವೆಬ್‌ಸೈಟ್ https://kmcdc.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.


ಸಾಲ ಯೋಜನೆಯ ವಿವರ:

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ, ಜೀಜಾವು ಜಲ ಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಸಾಂಗಕ್ಕೆ ಸಾಲ ಯೋಜನೆ, ಮರಾಠ ಮಿಲ್ಟಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.



Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99