-->
ಕಲರ್ಸ್‌ ಕನ್ನಡ ವಾಹಿನಿಯಲ್ಲಿ "ನೂರು ಜನ್ಮಕೂ" ಧಾರಾವಾಹಿ ಆರಂಭ

ಕಲರ್ಸ್‌ ಕನ್ನಡ ವಾಹಿನಿಯಲ್ಲಿ "ನೂರು ಜನ್ಮಕೂ" ಧಾರಾವಾಹಿ ಆರಂಭ

ಕಲರ್ಸ್‌ ಕನ್ನಡ ವಾಹಿನಿಯಲ್ಲಿ "ನೂರು ಜನ್ಮಕೂ" ಧಾರಾವಾಹಿ ಆರಂಭ





ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ.


ಡಿಸೆಂಬರ್ 23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ'ನೂರು ಜನ್ಮಕೂ' ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ'ನೂರು ಜನ್ಮಕೂ' ಒಂದು ಉತ್ಕಟ ಪ್ರೇಮಕತೆ.


'ನೂರು ಜನ್ಮಕೂ' ಕಥೆಯ ಹಿನ್ನೆಲೆ;

ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು.


ಚಿರಂಜೀವಿ ಅತಿಮಾನುಷ ಶಕ್ತಿಗಳ ಹಿಡಿತಕ್ಕೆ ಸಿಕ್ಕು ನಲುಗುವಾಗ ರಾಘವೇಂದ್ರಸ್ವಾಮಿಯ ಪರಮಭಕ್ತೆಯಾದ ಮೈತ್ರಿ ತನ್ನ ಶ್ರದ್ಧೆ ಹಾಗೂ ನಂಬಿಕೆಗಳ ಮುಖಾಂತರ ಅವನನ್ನು ರಕ್ಷಿಸಲು ಪಣತೊಡುತ್ತಾಳೆ. ಚಿರಂಜೀವಿಯ ಜೀವ ಕಾಪಾಡುತ್ತಲೇ ತಮ್ಮ ಪ್ರೀತಿಯನ್ನೂ ಉಳಿಸಿಕೊಳ್ಳಲು ಒದ್ದಾಡುವ ಹೆಣ್ಣಾಗಿ ಮೈತ್ರಿ ನೋಡುಗರ ಮನಸನ್ನು ಆವರಿಸಿಕೊಳ್ಳುವುದರಲ್ಲಿ ಸಂಶಯವಿಲ್ಲ.


ತಾರಾಗಣ ಶ್ರವಂತ್ ರಾಧಿಕಾ ನಿರ್ದೇಶನದ ಈ ಧಾರಾವಾಹಿಯಲ್ಲಿ ಹೆಸರಾಂತ ನಟನಟಿಯರ ದಂಡೇ ಇದೆ. 'ಗೀತಾ' ಧಾರಾವಾಹಿಯಲ್ಲಿ ನಾಯಕ ವಿಜಯ್ ಆಗಿ ನಟಿಸಿದ್ದ ಧನುಷ್ ಗೌಡ ಇದೀಗ 'ನೂರು ಜನ್ಮಕೂ' ಧಾರಾವಾಹಿಯಲ್ಲಿ ಚಿರಂಜೀವಿ ಪಾತ್ರದಲ್ಲಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ.





Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99