ಬಾಲಕರಿಬ್ಬರ ಜೊತೆಗೆ ಅನುಚಿತ ವರ್ತನೆ: ಕಾನ್ಸ್‌ಸ್ಟೆಬಲ್ ವಿರುದ್ಧ ಪೋಕ್ಸೋ ಪ್ರಕರಣ; ಆರೋಪಿ ಪರಾರಿ
ಬಾಲಕರಿಬ್ಬರ ಜೊತೆಗೆ ಅನುಚಿತ ವರ್ತನೆ: ಕಾನ್ಸ್‌ಸ್ಟೆಬಲ್ ವಿರುದ್ಧ ಪೋಕ್ಸೋ ಪ್ರಕರಣ; ಆರೋಪಿ ಪರಾರಿ
ಬಾಲಕರಿಬ್ಬರ ಮೇಲೆ ಅಮಾನುಷ ಹಲ್ಲೆ ಮಾಡಿ ಅವರ ಜೊತೆಗೆ ಅನುಚಿತ ವರ್ತನೆ ತೋರಿದ ಕಾನ್ಸ್‌ಸ್ಟೆಬಲ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ಪರಾರಿಯಾಗಿದ್ಧಾರೆ.
ಕಲಬುರ್ಗಿಯ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್ಸ್‌ಟೆಬಲ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ತನ್ನ ಇಬ್ಬರು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪತ್ನಿ ವಿಶ್ವವಿದ್ಯಾನಿಲಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಆರೋಪಿ ಪೊಲೀಸ್ ಸಿಬ್ಬಂದಿ ತನ್ನ 16 ಮತ್ತು 12 ವರ್ಷದ ಗಂಡು ಮಕ್ಕಳನ್ನು ಹಲ್ಲೆ ನಡೆಸಿದ್ದು, ಅವರ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇಬ್ಬರು ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.