ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಜನವರಿ 2ರಿಂದ ಜನವರಿ 5ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಿರುಷಷ್ಠಿ ಮಹೋತ್ಸವ

ಜನವರಿ 2ರಿಂದ ಜನವರಿ 5ರವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಿರುಷಷ್ಠಿ ಮಹೋತ್ಸವ





ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ. ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.


ಜನವರಿ 2ರಂದು ಸಂಜೆ 5:30ರಿಂದ ಧರ್ಮ ಸಮ್ಮೇಳನ ಸಭಾ ಕಾರ್ಯಕ್ರಮ ಜರುಗಲಿದ್ದು ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 6:30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.

ಅದೇ ರೀತಿ ಜನವರಿ 5ರವರೆಗೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ. 

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW