ಪುತ್ತೂರು: ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭಿಣಿನ್ನಾಗಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಕೊನೆಗೂ ಅರೆಸ್ಟ್
Saturday, July 5, 2025
ಪುತ್ತೂರು: ವಿವಾಹ ಆಗುವುದಾಗಿ ನಂಬಿಸಿ ಸಹಪಾಠಿ ವಿದ್ಯಾರ್ಥಿನಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾದ ಬಳಿಕ ಮದುವೆಗೆ ನಿರಾಕರಿಸಿ ತಲೆಮರೆಸಿಕೊಂಡಿ ವಂಚನೆಗೈದಿದ್ದ ಆರೋಪಿ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಜೆ.ರಾವ್‌ನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ವಿವಾಹಕ್ಕೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಯುವತಿಯ ನೀಡಿರುವ ದೂರಿನಂತೆ ಆತನ ಮೇಲೆ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕೃಷ್ಣ ಜೆ.ರಾವ್ ತಲೆಮರೆಸಿಕೊಂಡಿದ್ದ. ಇದೀಗ ದ.ಕ.ಜಿಲ್ಲಾ ಪೊಲೀಸರು ಆತನನ್ನು ಮೈಸೂರಿನ ಟಿ.ನರಸೀಪುರ ಎಂಬಲ್ಲಿಂದ ಶುಕ್ರವಾರ ರಾತ್ರಿ ಬಂಧಿಸಿ ಕರೆ ತಂದಿದ್ದಾರೆ. ಬಂಧಿತ ಆರೋಪಿಯನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ
ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿ ವಿದ್ಯಾರ್ಥಿನಿಯನ್ನು ಕೃಷ್ಣ ಜೆ.ರಾವ್ ಪ್ರೀತಿಸುತ್ತಿದ್ದ. ಸದ್ಯ ಆಕೆ ಪದವಿ ವ್ಯಾಸಂಗ ಮಾಡುತ್ತಿದ್ದಾಳೆ. 2024ರ ಬಳಿಕ ಮದುವೆಯಾಗುವುದಾಗಿ ನಂಬಿಸಿ ಆಕೆಯನ್ನು ಯಾರೂ ಇಲ್ಲದ ಸಂದರ್ಭ ತನ್ನ ಮನೆಗೇ ಕರೆದು ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ. ಹೀಗೆ ನಾಲ್ಕೈದು ಬಾರಿ ಲೈಂಗಿಕ ಸಂಪರ್ಕ ಮಾಡಿದ್ದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇತ್ತೀಚೆಗೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಆಕೆ ಗರ್ಭಿಣಿ ಎಂದು ಗೊತ್ತಾಗುತ್ತಿದ್ದಂತೆ ಈತ ಮದುವೆಗೆ ಹಿಂದೇಟು ಹಾಕಿದ್ದಾನೆ. ಆದ್ದರಿಂದ ಶ್ರೀಕೃಷ್ಣ ಜೆ.ರಾವ್ ಮದುವೆಗೆ ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.