-->
ಪುತ್ತೂರು: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ- ಆರೋಪಿ ಅರೆಸ್ಟ್

ಪುತ್ತೂರು: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ- ಆರೋಪಿ ಅರೆಸ್ಟ್


ಪುತ್ತೂರು: ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿರುವ ಆರೋಪದಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ.

ಮಂಗಳೂರು ನಿವಾಸಿ ತೌಹೀದ್‌ ಬಂಧಿತ ಆರೋಪಿ.

ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ಸು ಸಂಜೆ 6:30 ಸುಮಾರಿಗೆ ಬಂಟ್ವಾಳ ತಾಲೂಕಿನ ಮಾಣಿ ಬಳಿ ಸಂಚಾರ ನಡೆಸುತ್ತಿತ್ತು. ಈ ವೇಳೆ ಆರೋಪಿ ತನ್ನ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿ ತನ್ನ ತಂದೆಗೆ ಕರೆ ಮಾಡಿ ತಿಳಿಸಿದ್ದಾಳೆ.

ಬಸ್ ಪುತ್ತೂರು ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣ ತಲುಪುತ್ತಿದ್ದಂತೆ ಆರೋಪಿಯು ಬಸ್ಸಿನ ಕಿಟಕಿಯ ಮೂಲಕ ಹಾರಲು ಪ್ರಯತ್ನಿಸಿದ್ದಾನೆ. ಈ ವೇಳೆ ಅಲ್ಲಿಗೆ ತಲುಪಿದ ವಿದ್ಯಾರ್ಥಿನಿಯ ತಂದೆ ಮತ್ತು ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ವಿದ್ಯಾರ್ಥಿನಿ ನೀಡಿರುವ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 56/2025 ಕಲಂ: 75 BNS 2023 ರಂತೆ ಪ್ರಕರಣ ದಾಖಾಲಿಸಿಕೊಂಡು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article