ಪುತ್ತೂರು: ಪ್ರೇಮ ವಂಚನೆ, ಸೆಕ್ಸ್ ಪ್ರಕರಣ- ಆರೋಪಿ ತಲೆಮರೆಸಿಕೊಳ್ಳಲು ಸಹಕರಿಸಿದ್ದ ತಂದೆ ಬಿಜೆಪಿ ಮುಖಂಡ ವಶಕ್ಕೆ
Saturday, July 5, 2025
ಪುತ್ತೂರು: ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭಿಣಿಯನ್ನಾಗಿಸಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪುತ್ರ ತಲೆಮರೆಸಿಕೊಳ್ಳಲು ಸಹಕರಿಸಿದ ತಂದೆ ಬಿಜೆಪಿ ಮುಖಂಡನನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಗರ್ಭಿಣಿಯಾದ ಬಳಿಕ ವಿವಾಹಕ್ಕೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ನೀಡಿರುವ ದೂರಿನಂತೆ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೇಲೆ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಶ್ರೀಕೃಷ್ಣ ಜೆ.ರಾವ್ ತಲೆಮರೆಸಿಕೊಂಡಿದ್ದ. ಶುಕ್ರವಾರ ರಾತ್ರಿ ಪೊಲೀಸರು ಆತನನ್ನು ಮೈಸೂರಿನ ಟಿ.ನರಸೀಪುರದಲ್ಲಿಂದ ಬಂಧಿಸಿ ಕರೆ ತಂದಿದ್ದಾರೆ.
ಇದೀಗ ಆರೋಪಿ ಪುತ್ರನಿಗೆ ತಪ್ಪಿಸಿಕೊಳ್ಳಲು ಸಹಕರಿಸಿದ ಹಿನ್ನೆಲೆಯಲ್ಲಿ ತಂದೆ ಜಗನ್ನಿವಾಸ್ ರಾವ್‌ನನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಇಬ್ಬರನ್ನೂ ನ್ಯಾಯಾಲಯದ ಮುಂದೆ ಶೀಘ್ರ ಹಾಜರುಪಡಿಸಲಿದ್ದಾರೆ. ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.