ನಿಮಿಷ ಪ್ರಿಯಾಗೆ ಮರಣದಂಡನೆ ರದ್ದು: ಹಲವು ದಿನಗಳ ಪ್ರಯತ್ನದಿಂದ ಬಿಡುಗಡೆ ಡಾ.ಕೆ.ಎ.ಪೌಲ್
Tuesday, July 22, 2025
ಸನಾ: ಭಾರತ ಹಾಗೂ ಯೆಮೆನ್‌ನ ಅಧಿಕಾರಿಗಳ ಭಾರೀ ಪ್ರಯತ್ನದ ಫಲವಾಗಿ ಯೆಮನ್‌ನಲ್ಲಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾರಿಗೆ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆಯನ್ನು ಯೆಮೆನ್ ಸರ್ಕಾರ ರದ್ದುಗೊಳಿಸಿದೆ ಎಂದು ಗ್ಲೋಬಲ್ ಪೀಸ್ ಇನ್‌ಷಿಯೇಟಿವ್ ಸಂಸ್ಥಾಪಕ ಮತ್ತು ಧಾರ್ಮಿಕ ಗುರು ಡಾ.ಕೆ.ಎ.ಪೌಲ್ ಹೇಳಿದ್ದಾರೆ.
ಈ ಕುರಿತು ವೀಡಿಯೊ ತುಣುಕು ಬಿಡುಗಡೆ ಮಾಡಿರುವ ಡಾ.ಕೆ.ಎ.ಪೌಲ್, 'ಯೆಮೆನ್ ನಾಯಕರ ಪರಿಣಾಮಕಾರಿ ಮತ್ತು ಪ್ರಾರ್ಥನಾ ಪೂರ್ವಕ ಪ್ರಯತ್ನದಿಂದ ಇದು ಸಾಧ್ಯವಾಗಿದೆ. ನಿಮಿಷ ಪ್ರಿಯಾ ಪ್ರಾಣ ಉಳಿಸಲು ಕಳೆದ 10 ದಿನಗಳಲ್ಲಿ ನಾಯಕರು ಪಟ್ಟ ಶ್ರಮ ಅಷ್ಟಿಷ್ಟಲ್ಲ. ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಎಲ್ಲಾ ನಾಯಕರಿಗೂ ಧನ್ಯವಾದಗಳು. ಇದರಲ್ಲಿ ಭಾರತದ ಪ್ರಯತ್ನವೂ ಸಾಕಷ್ಟಿದೆ. ದೇವರ ದಯೆಯಿಂದ ನಿಮಿಷ ಪ್ರಿಯಾ ಬಿಡುಗಡೆಯಾಗಲಿದ್ದಾರೆ. ನಿಮಿಷ ಅವರನ್ನು ಕಾನೂನುಬದ್ಧವಾಗಿ ಮತ್ತು ಸುರಕ್ಷಿತವಾಗಿ ಕರೆದೊಯಬಹುದು' ಎಂದು ಅವರು ಹೇಳಿದ್ದಾರೆ.
ಸನಾ ಜೈಲಿನಲ್ಲಿರುವ ನಿಮಿಷ ಪ್ರಿಯಾರನ್ನು ಒಮಾನ್, ಜೆಡ್ಡಾ, ಈಜಿಪ್ಟ್, ಇರಾನ್ ಅಥವಾ ಟರ್ಕಿಗೆ ಕರೆದೊಯ್ಯಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಿರುವ ಭಾರತಕ್ಕೆ ಅಗತ್ಯ ಸಹಕಾರ ನೀಡಲಾಗುವುದು' ಎಂದು ಡಾ. ಪೌಲ್ ತಿಳಿಸಿದ್ದಾರೆ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕಳೆದವಾರ ಹೇಳಿಕೆಯೊಂದನ್ನು ನೀಡಿ, 'ನಿಮಿಷ ಅವರ ಬಿಡುಗಡೆಗೆ ಸರ್ಕಾರ ಸಕ್ರಿಯವಾಗಿ ಕೆಲಸ ಮಾಡುತ್ತಿದೆ' ಎಂದು ಅವರು ಹೇಳಿದ್ದಾರೆ.