-->
ಬಂಟ್ವಾಳ: ಕಾನೂನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿ ಆಝಾನ್- ಧಾರ್ಮಿಕ ಶಿಕ್ಷಣ ಕೇಂದ್ರದ ವಿರುದ್ಧ ಎಫ್ಐಆರ್

ಬಂಟ್ವಾಳ: ಕಾನೂನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿ ಆಝಾನ್- ಧಾರ್ಮಿಕ ಶಿಕ್ಷಣ ಕೇಂದ್ರದ ವಿರುದ್ಧ ಎಫ್ಐಆರ್



ಬಂಟ್ವಾಳ: ನಿಗದಿಪಡಿಸಿರುವ ಪ್ರಮಾಣಕ್ಕಿಂತ ಅಧಿಕ ಶಬ್ದದಲ್ಲಿ ಕಾನೂನು ಉಲ್ಲಂಘಿಸಿ ಆಝಾನ್ ಕೂಗುತ್ತಿದ್ದ ಧಾರ್ಮಿಕ ಶಿಕ್ಷಣ ಕೇಂದ್ರದ ಧ್ವನಿವರ್ಧಕಗಳನ್ನು ವಶಕ್ಕೆ ತೆಗೆದುಕೊಂಡು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ‌.

ಬಂಟ್ವಾಳ  ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ, ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯಾಚರಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ, ಇತ್ತೀಚೆಗೆ ಅನಧಿಕೃತವಾಗಿ ಧಾರ್ಮಿಕ ಕೇಂದ್ರ ನಿರ್ಮಾಣವಾಗಿತ್ತು. ಇಲ್ಲಿ ಯಾವುದೇ ಪರವಾನಿಗೆಯನ್ನು ಇಲ್ಲದೇ ಧ್ವನಿವರ್ಧಕ ಅಳವಡಿಸಿಕೊಂಡು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ದಿನಕ್ಕೆ 5 ಬಾರಿ ಆಝಾನ್ ಕೂಗಲಾಗುತ್ತಿತ್ತು. ಇದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿತ್ತು.

ಈ ಮೂಲಕ ಧ್ವನಿವರ್ಧಕ ಬಳಕೆ ಮಾಡಿ ಕಾನೂನು ಉಲ್ಲಂಘಿಸಿರುತ್ತಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ಅನುಮತಿ ಪಡೆದು ಪೊಲೀಸರು ಠಾಣೆಯಲ್ಲಿ ಅ.ಕ್ರ 133/2025 ಕಲಂ:37,92 (ಐ), 109 ಕೆಪಿ ಆಕ್ಟ್‌ ಹಾಗೂ 292 ಬಿಎನ್‌ಎಸ್‌ ರಂತೆ ಪ್ರಕರಣ ದಾಖಲಿಸಿಕೊಂಡು ಧ್ವನಿವರ್ಧಕವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Ads on article

Advertise in articles 1

advertising articles 2

Advertise under the article