ಮೂಡುಬಿದಿರೆ: ದಲಿತ ಯುವತಿಯೊಂದಿಗೆ ದೈಹಿಕ ಸಂಪರ್ಕ, ವಂಚನೆ- ಫೋಟೋಗ್ರಾಫರ್ ಅರೆಸ್ಟ್


ಮೂಡುಬಿದಿರೆ: ದಲಿತ ಯುವತಿಯನ್ನು ವಿವಾಹವಾಗುತ್ತೇನೆಂದು ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಬಳಿಕ ಮದುವೆಗೆ ನಿರಾಕರಿಸಿದ ಮೂಡುಬಿದಿರೆಯ ಫೋಟೋಗ್ರಾಫರ್‌ನನ್ನು ಪೊಲೀಸರು ಬಂಧಿಸಿ ದಲಿತ ದೌರ್ಜನ್ಯ ಹಾಗೂ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿದ್ದಾರೆ. 

ಮೂಲತಃ ಉಪ್ಪಿನಂಗಡಿ ಬೆದ್ರೋಡಿಯ ನಿವಾಸಿ, ಪ್ರಸ್ತುತ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿದ್ದ ಸಂಕೇತ್ ಗಾಣಿಗ(31) ಪ್ರಕರಣದ ಆರೋಪಿ. 

ಸಂಕೇತ್ ಗಾಣಿಗನಿಗೆ ಉಡುಪಿ ಮೂಲದ ಯುವತಿಯೊಬ್ಬಳು ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾಗಿದ್ದಾಳೆ. ಬಳಿಕ ಇಬ್ಬರ ನಡುವೆ ಸಲುಗೆ ಬೆಳೆದು, ಆತ ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಜಾತಿಯ ನೆಪವೊಡ್ಡಿ ಮದುವೆಗೆ ನಿರಾಕರಿಸಿದ್ದಾನೆ. ಈ ಬಗ್ಗೆ ಯುವತಿ ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.